ಬೆಂಗಳೂರು,ಏಪ್ರಿಲ್,13,2021(www.justkananda.in) : ಒಂದು ತಿಂಗಳು ಪ್ರತಿಭಟನೆ ನಡೆಸಿದರೂ ಸರ್ಕಾರ ಸಾರಿಗೆ ನೌಕರರ ಮುಷ್ಕರಕ್ಕೆ ಬಗ್ಗಲ್ಲ, ಸಂಬಳ ಕೊಡುವುದೂ ಇಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿರುವುದು ದೌರ್ಜನ್ಯದ ಪರಮಾವಧಿ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ಸರಿಯಲ್ಲ. ದಂಡಿಸುವ ದಿಕ್ಕಿನಡಿ ಸರ್ಕಾರ ಮುಂದಾಗಬಾರದು. ಸಿಎಂ ಯಡಿಯೂರಪ್ಪನವರು ಮೊಂಡುತನ ಮಾಡುವುದನ್ನು ಬಿಟ್ಟು ಸಾರಿಗೆ ನೌಕರರ ಬೇಡಿಕೆ ಬಗ್ಗೆ ಇನ್ನೊಮ್ಮೆ ಪರಿಶೀಲನೆ ನಡೆಸಲಿ ಎಂದು ಆಗ್ರಹಿಸಿದರು.
ಸಾರಿಗೆ ನೌಕರರ ಸಂಕಷ್ಟವನ್ನು ಆಲಿಸದೇ, ಖಾಸಗಿ ವಾಹನ ಚಾಲಕರನ್ನು ತಂದು ಬಸ್ ಓಡಿಸುತ್ತಿರುವ ಸರ್ಕಾರದ ಕ್ರಮ ಖಂಡನೀಯ. ಸರ್ಕಾರದ ಈ ನಡೆ ಯಶಸ್ವಿಯಾಗಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
key words : CM-B.S.Y-Statement-atrocious-Extreme-Kodihalli Chandrasekhar