ದಾವೊಸ್, ಜನವರಿ 23- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವರ್ಲ್ಡ್ ಎಕನಾಮಿಕ್ ಫೋರಂ ನಲ್ಲಿ ಕೇಂದ್ರ ಕೈಗಾರಿಕಾ ಸಚಿವ ಪಿಯುಷ್ ಗೋಯಲ್ ಅವರು ವಿಷಯ ಮಂಡನೆ ಮಾಡಿದ, “Strategic outlook: India ” ಎಂಬ ಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಸಂವಾದ ಕಾರ್ಯಕ್ರಮದ ಅಂತ್ಯದಲ್ಲಿ ದೇಶದ ಬೆಳವಣಿಗೆಯಲ್ಲಿ ರಾಜ್ಯಗಳ ಪಾತ್ರದ ಕುರಿತು ಮಾತನಾಡಿದ ಮುಖ್ಯಮಂತ್ರಿಗಳು, ಎಲ್ಲ ಆರ್ಥಿಕ ಚಟುವಟಿಕೆಗಳೂ ರಾಜ್ಯಗಳಲ್ಲಿ ನಡೆಯುವುದರಿಂದ, ದೇಶದ ಆರ್ಥಿಕತೆಯ ಬೆಳವಣಿಗೆಗೆ ರಾಜ್ಯಗಳ ಬೆಳವಣಿಗೆ ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಕನಸನ್ನು ಸಾಕಾರಗೊಳಿಸಲು ರಾಜ್ಯಗಳು ತಮ್ಮ ಆರ್ಥಿಕ ಚಟುವಟಿಕೆಗಳನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂದು ತಿಳಿಸಿದರು.
“ನನ್ನ ರಾಜ್ಯ ಕರ್ನಾಟಕ 250 ಬಿಲಿಯನ್ ಡಾಲರ್ ಜಿಡಿಪಿಯನ್ನು ಹೊಂದಿದ್ದು, ಶೇ. 9 ರ ಬೆಳವಣಿಗೆ ದರ ಹೊಂದಿದೆ. ಈ ಸಮಾವೇಶದಲ್ಲಿ ನಾವು ಹೂಡಿಕೆದಾರರು ಮತ್ತು ಉದ್ಯಮಿಗಳನ್ನು ಭಾರತದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಿದ್ದೇವೆ. ಇದಕ್ಕೆ ಉತ್ತಮ ಸ್ಪಂದನೆ ದೊರೆಯುವ ವಿಶ್ವಾಸವಿದೆ” ಎಂದು ತಿಳಿಸಿದರು.
ಹೂಡಿಕೆದಾರರೂ ಸಹ ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಆರ್ಥಿಕತೆಯ ಆಶಯವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಅಭಿಪ್ರಾಯ ಪಟ್ಟ ಅವರು, ಸಂವಾದದ ಕುರಿತು ಅಭಿಪ್ರಾಯ ತಿಳಿಸಲು ಅವಕಾಶ ದೊರೆತುದಕ್ಕಾಗಿ ಹರ್ಷ ವ್ಯಕ್ತಪಡಿಸಿದರು.
ಕೇಂದ್ರ ಸಚಿವ ಪಿಯುಷ್ ಗೋಯಲ್ ವಿಷಯ ಮಂಡಿಸಿ, ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Key words : CM B.S.Yadiyurappa gave a closing remarks at a panel on STRATEGIC OUTLOOK INDIA. Piyush Goyal was in the panel,Cnbc Shereen Bhan