ಬೆಂಗಳೂರು,ಜುಲೈ,8,2021(www.justkannada.in): ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಈ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಎಫ್ಐಆರ್ ದಾಖಲುಸುವಂತೆ ಕೋರಿ ಬಿ.ಎಸ್ ಯಡಿಯೂರಪ್ಪ ಸೇರಿ 9 ಮಂದಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಖಾಸಗಿ ದೂರು ದಾಖಲಿಸಿದ್ದರು.
ಇದೀಗ ಖಾಸಗಿ ದೂರನ್ನ ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಯಂತ್ ಕುಮಾರ್ ಅವರು ಮಹತ್ವದ ಅದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧ ವಾದ ಆಲಿಸಿದ್ದ ಕೋರ್ಟ್ ಆದೇಶವನ್ನ ಇಂದಿಗೆ ಕಾಯ್ದಿರಿಸಿತ್ತು.
ಈ ಮೊದಲು ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ಅಬ್ರಾಹಂ ಸಲ್ಲಿಸಿದ್ದ ಅರ್ಜಿಗೆ ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು. ಈ ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠ, ಇಂದು ಎಫ್ ಐ ಆರ್ ದಾಖಲಿಸುವಂತೆ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿದೆ.
Key words: CM B.S yeddyurappa- Big relief -Private complaint- FIR-court