ಬೆಂಗಳೂರು,ಜುಲೈ,28,2021(www.justkannada.in): ಸಿಎಂ ಸ್ಥಾನಕ್ಕೆ ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿದ್ದು ಯಡಿಯೂರಪ್ಪ.ಈ ಕಾರಣದಿಂದ ಸರ್ಕಾರದ ಮೇಲೆ ಬಿಎಸ್ ವೈ ಸಹಜವಾಗಿ ಹಿಡಿತ ಹೊಂದಿರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಬಸವರಾಜ್ ಬೊಮ್ಮಾಯಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾ? ಬಸವರಾಜ್ ಬೊಮ್ಮಾಯಿ ಹೆಸರು ಸೂಚಿಸಿರುವುದು ಯಡಿಯೂರಪ್ಪ. ಈ ಕಾರಣದಿಂದ ಸರ್ಕಾರದ ಮೇಲೆ ಬಿಎಸ್ ವೈ ಸಹಜವಾಗಿ ಹಿಡಿತಹೊಂದಿರುತ್ತಾರೆ. ಈಗಿರುವಾಗ ಬೊಮ್ಮಾಯಿ ಸ್ವತಂತ್ರವಾಗಿ ಸರ್ಕಾರ ನಡೆಸಲು ಸಾಧ್ಯವಾ..? ಆದ್ರೆ ಈ ಕ್ಷಣದಲ್ಲೆ ನಾನು ಬೊಮ್ಮಾಯಿ ಬಗ್ಗೆ ಏನು ಹೇಳುವುದಿಲ್ಲ. ಅವರ ಆಡಳಿತವನ್ನು ಕಾದು ನೋಡೋಣ. ಈಗಲೇ ಅವರ ಮೇಲೆ ಸುಮ್ಮನೆ ದೂರುವುದಿಲ್ಲ. ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸುತ್ತೇನೆ ಎಂದರು.
ಎಸ್.ಆರ್.ಬೊಮ್ಮಾಯಿಯವರ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ.
ಎಸ್.ಆರ್.ಬೊಮ್ಮಾಯಿಯವರ ಗುಣ ಮಗನಿಗೆ ಬರುತ್ತೆ ಎಂದು ಹೇಳಲು ಸಾಧ್ಯವಿಲ್ಲ. ಮಹಾತ್ಮಾ ಗಾಂಧಿ ಮಗ ಕುಡುಕನಾದ. ಮಹಾತ್ಮಾ ಗಾಂಧಿಯ ಮಗ ಮಹಾತ್ಮ ಗಾಂಧಿಯಾಗಲಿಲ್ಲ. ಅದೇ ರೀತಿ ಬೊಮ್ಮಯಿ ಮಗ ತಂದೆಯಂತೆ ಆಗುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ತಂದೆಯ ಗುಣ ಕೆಲವು ಮಕ್ಕಳಿಗೆ ಬರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಸೂಪರ್ ಸಿಎಂ ಎಂಬ ಆರೋಪದಿಂದ ಮುಕ್ತನಾದೆ ಎಂಬ ವಿಜಯೇಂದ್ರ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಅಂದ್ರೆ ಸೂಪರ್ ಸಿಎಂ ಆಗಿದ್ದೆ ಎಂಬುದು ಅವರ ಮಾತಿನ ಅರ್ಥನಾ..?ಅದನ್ನ ಒಪ್ಪಿಕೊಂಡ ತರ ಅಲ್ಲವಾ. ಸಿಎಂ ಆಯ್ಕೆಯಲ್ಲಿ ಯಾರ ಕೈ ಮೇಲಾಗಿದೆ. ಇನ್ನೂ ಮೂರು ತಿಂಗಳ ಏನು ಮಾತನಾಡಲ್ಲ. ನೋಡೋಣ ಎಂದರು.
key words: CM- basavaraj Bommai –BS yeddyurappa- independently-control –government- Siddaramaiah