ಮೈಸೂರು,ಆಗಸ್ಟ್,11,2022(www.justkannada.in): ಮೈಸೂರು ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಎಂಜಿನಿಯರಿಂಗ್ ಕಾಲೇಜಿನ ತಂತ್ರಜ್ಞಾನ ಭವನದ ಕಟ್ಟಡವನ್ನು ಗುರುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.
ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಇಂದು ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನ ಮಹೋತ್ಸವ ಮತ್ತು ವಿವಿ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದಕ್ಕೂ ಮುನ್ನ ಸಿಎಂ ಎಂಜಿನಿಯರಿಂಗ್ ಕಾಲೇಜಿನ ಭವನವನ್ನು ಲೋಕಾರ್ಪಣೆಗೊಳಿಸಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದರಾದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು. ನಂತರ ಮಹಾರಾಜ ಕಾಲೇಜಿನ ಮೈದಾನದಲ್ಲಿ ಸಾರ್ವಜನಿಕರ ಸಭೆ ಆಯೋಜಿಸಲಾಗಿತ್ತು. ನಂತರ ನಟ ಯಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಂದ ಸಂಗೀತ ಕಾರ್ಯಕ್ರಮ ಇರಲಿದೆ.
ಏನೆಲ್ಲಾ ಉದ್ಘಾಟನೆ:
ಈ ವಿಶ್ವವಿದ್ಯಾನಿಲಯದ ಫಾರ್ಮಸಿ ಕಾಲೇಜು ಕಟ್ಟಡ, ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸುವರ್ಣ ಮಹೋತ್ಸವ ಕಟ್ಟಡ, ಭೂಗೋಳಶಾಸ್ತ್ರ ಮತ್ತು ಭೂವಿಜ್ಞಾನ ವಿಭಾಗಗಳ ವಿಸ್ತರಿಸಿದ ಮೊದಲನೇ ಮಹಡಿ ಕಟ್ಟಡ, ಗಣಕ ವಿಜ್ಞಾನ ಅಧ್ಯಯನ ವಿಭಾಗದ ನವೀಕೃತ ಸಭಾಂಗಣ, ಈ ಪ್ರಾಚ್ಯವಿದ್ಯಾ ಸಂಶೋಧನಾಲಯ ಮತ್ತು ಮಿಥಿಕ್ ಸೊಸೈಟಿ ಕಾರ್ಯಕ್ರಮ ಹಾಗೂ ಗ್ರಹನಿಧಿ ಕೃತಿ ಬಿಡುಗಡೆ, ಬಸವೇಶ್ವರ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಕಟ್ಟಡ ಉದ್ಘಾಟನೆ, ವಿಶ್ವಕೋಶ 8 ಮತ್ತು 9ನೇ ಸಂಪುಟ ಅನಾವರಣ, ಸೆಂರ್ಟ ಆಫ್ ಎಕ್ಸಲೆನ್ಸ್ಘಿ, ಸ್ಯಾಪ್, ಐಐಎಂ ಮತ್ತು ಇಸಿ (ವೃತ್ತಿ ಆಧಾರಿತ ಮತ್ತು ಕೌಶಲ್ಯ ಅಭಿವೃದ್ಧಿ ಕೋರ್ಸುಗಳನ್ನು ವರ್ಜುವಲ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.
Key words: CM Basavaraj Bommai- inaugurated -technology -building -School of Engineering College