ಬೆಂಗಳೂರು,ಮಾರ್ಚ್,4,2022(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು 2022-23ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 12.30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಇದ್ದು ಈ ಹಿನ್ನೆಲೆಯಲ್ಲಿ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
ಚೊಚ್ಚಲ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನೀರಾವರಿ, ಕೃಷಿ, ಲೋಕೋಪಯೋಗಿ, ಸಮಾಜ ಕಲ್ಯಾಣ, ಗ್ರಾಮೀಣಾಭೀವೃದ್ಧಿ ಕ್ಷೇತ್ರಗಳಿಗೆ ಆದ್ಯತೆ ನೀಡುವ ನಿರೀಕ್ಷೆ ಇದೆ. ಅದರಲ್ಲೂ ರಾಜ್ಯದ ನೀರಾವರಿ ಯೋಜನೆಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳು ಹೋರಾಟ ಮಾಡುತ್ತಿವೆ. ಆದ್ದರಿಂದ ಈ ವಲಯಕ್ಕೆ ಆದ್ಯತೆ ನೀಡುವ ಅನಿವಾರ್ಯತೆ ಎದುರಾಗಿದೆ.
ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದ ನಾಯಕರು. ಆದ್ದರಿಂದ ಬಜೆಟ್ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನಿರೀಕ್ಷೆ ಮಾಡಲಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಗಮನಹರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Key words: CM Basavaraja Bommai -countdown – budget.