ಬೆಂಗಳೂರು,ಡಿಸೆಂಬರ್,3,2022(www.justkannada.in): ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ.ವರೆಗೆ ವಿಶೇಷ ಆರೋಗ್ಯ ವಿಮೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಅವರು, ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ.ವರೆಗೆ ವಿಶೇಷ ಆರೋಗ್ಯ ವಿಮೆ ಘೋಷಣೆ ಮಾಡಿದ್ದೇವೆ. ಸರ್ಕಾರ ನೀಡುವ ಮನೆಗಳಲ್ಲಿ ವಿಶೇಷಚೇತನರಿಗೆ ಶೇ.3 ರಷ್ಟು ಮೀಸಲು ನೀಡಲಾಗುತ್ತದೆ. ಅಂಗವಿಕಲ ಮಕ್ಕಳಿಗೆ ವಿಶೇಷ ತರಬೇತಿ ಕೇಂದ್ರ 2000 ಸೈಕಲ್ ನೀಡಲು ತೀರ್ಮಾನಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಹಾಲಪ್ಪ ಆಚಾರ್ . ಸಂಸದ ಪಿ.ಸಿ ಮೋಹನ್, ಶಾಸಕ ರಿಜ್ವಾನ್ ಅರ್ಷದ್ ಸೇರಿ ಹಲವರು ಉಪಸ್ಥಿತರಿದ್ದರು.
Key words: CM Bommai -announced –special- health- insurance – disabled -people