ಬೆಂಗಳೂರು,ಫೆಬ್ರವರಿ,25,2022(www.justkannada.in): ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿ ಯುದ್ಧ ಸಾರಿರುವ ಹಿನ್ನೆಲೆ ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡಿಗರನ್ನ ರಕ್ಷಿಸಿ ವಾಪಸ್ ಕರೆತರಲು ಮುಂದಾಗುವಂತೆ ವಿದೇಶಾಂಗ ಸಚಿವ ಜೈ ಶಂಕರ್ ಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಈ ಸಂಬಂಧ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಚರ್ಚಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ ಸಿಲುಕಿರುವ ಕನ್ನಡ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಮನವಿ ಮಾಡಿದ್ದಾರೆ.
ಈ ವೇಳೆ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಸ್ ಕರೆತರುವ ಬಗ್ಗೆ ಸಿಎಂಗೆ ವಿದೇಶಾಂಗ ಸಚಿವ ಜೈ ಶಂಕರ್ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
Key words: CM Bommai-central- Minister-Jaishankar