ಬೆಂಗಳೂರು,ಅಕ್ಟೋಬರ್,15,2021(www.justkannada.in): ಕನ್ನಡದ ಹಿರಿಯ ನಟ, ಚಿಂತಕ, ಪ್ರೊ.ಜಿ.ಕೆ ಗೋವಿಂದ ರಾವ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.
ರಂಗಭೂಮಿ, ಸಿನಿಮಾ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿದಿದ್ದ ಪ್ರೊ.ಜಿ.ಕೆ ಗೋವಿಂದ ರಾವ್ ಅವರು , ತಮ್ಮ ಜನಪರ ನಿಲುವಿನಿಂದ ಜನಮಾನಸದಲ್ಲಿ ವಿಶಿಷ್ಟ ಸ್ಥಾನ ಗಳಿಸಿದ್ದರು. ಅವರ ನಿಧನದಿಂದ ಒಬ್ಬ ಅನನ್ಯ ಚಿಂತಕನನ್ನು ನಾಡು ಕಳೆದುಕೊಂಡಂತಾಗಿದೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇನ್ನು ಟ್ವೀಟ್ ಮಾಡಿ ಜಿ.ಕೆ ಗೋವಿಂದರಾವ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ,”ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ. ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ,” ಎಂದು ಹೇಳಿದ್ದಾರೆ.
Key words: CM -Bommai – Siddaramaiah -condole – actor- GK Govindarao- death
ENGLISH SUMMARY….
Veteran actor G.K. Govindarao no more: CM Bommai, Siddaramaiah offer condolences
Bengaluru, October 15, 2021 (www.justkannada.in): Chief Minister Basavaraj Bommaiah and former Chief Minister Siddaramaiah have expressed their grief over the death of senior Kannada cine actor Prof. G.K. Govinda Rao.
In his condolences, Chief Minister Basavaraj Bommai expressed his view that Prof. G.K. Govindarao was not only a film artist but also had made a mark in the field of theatre and literature. He had a special place in the hearts of the people through his pro-people views and thoughts. “We have lost a reformer and good artist. I pray to God to give strength to the family members of the deceased and his fans and well-wishers to bear his loss,” he said.
Former Chief Minister and the leader of the Opposition Siddaramaiah has expressed his shock over the demise of a senior litterateur, reformer, and actor Prof. G.K. Govinda Rao. “He was one of my well-wishers, guide, and good friend. I offer my deep condolences to his family members, fans, and followers,” he said.
Keywords: Prof G.K. Govindarao/ demise/ CM Bommai/ Siddaramaiah/ condole