ನಟ ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಬಿಎಸ್ ವೈ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಜೂನ್,15,2021(www.justkannada.in):  ಬೈಕ್ ಅಪಘಾತದಲ್ಲಿ ತೀವ್ರ  ಗಾಯಗೊಂಡು ಆಸ್ಪತ್ರೆಗೆ  ದಾಖಲಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ.

 ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದಿದ್ದಾರೆ.

ನಟ ಸಂಚಾರಿ ವಿಜಯ್ ನಿಧನಕ್ಕೆ ಟ್ವಿಟ್ಟರ್ ನಲ್ಲಿ ಸಂತಾಪ ಸೂಚಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರತಿಭೆ ಮತ್ತು ಮಾನವೀಯ ಗುಣ ನಡತೆಗಳಿಂದ ಕಿರಿ ವಯಸ್ಸಿನಲ್ಲಿಯೇ ಎಲ್ಲರ ಮನಗೆದ್ದು ಮಿಂಚಿ ಮರೆಯಾದ ನಟ ಸಂಚಾರಿ ವಿಜಯ್ ಸಾವಿನಿಂದ ದುಃಖಿತನಾಗಿದ್ದೇನೆ. ವಿಜಯ್ ಕುಟುಂಬ ಮತ್ತು ಅಭಿಮಾನಿ ಬಳಗದ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಅಂಗಾಂಗ ದಾನದ ವಿಜಯ್ ಕುಟುಂಬದ ನಿರ್ಧಾರಕ್ಕೆ ನನ್ನ ನಮನಗಳು ಎಂದಿದ್ದಾರೆ.

Key words: CM- BS yeddyurappa-and former CM -Siddaramaiah -condole – death -actor –sanchari Vijay.