ದಾವಣಗೆರೆ,ನ,3,2019(www.justkannada.in): ಅನರ್ಹ ಶಾಸಕರ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿರುವ ಆಡಿಯೋ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಯುಟಿ ಖಾದರ್ ಆಗ್ರಹಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದ ಜತೆ ಮಾತನಾಡಿದ ಮಾಜಿ ಸಚಿವ ಯುಟಿ ಖಾದರ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಮುಖಂಡರ ಕೋರ್ ಕಮಿಟಿ ಸಭೆಯಲ್ಲಿ, ಅನರ್ಹ ಶಾಸಕರ ಕುರಿತಾಗಿ ಬಿಜೆಪಿ ಮುಖಂಡರ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇಂತಹ ಆಡಿಯೋ ಇದೀಗ ವೈರಲ್ ಆಗಿದೆ. ಅಪರೇಷನ್ ಕಮಲ ವಿಚಾರ ಸಂವಿಧಾನ ಬಾಹಿರವಾದದ್ದು. ಇದು ಜನಪ್ರತಿನಿಧಿ ಕಾಯ್ದೆ ಸ್ಪಷ್ಟ ಉಲ್ಲಂಘನೆಯಾಗಿದೆ. ಇದರವಿರುದ್ದ ಹೋರಾಟ ಮಾಡುತ್ತೇವೆ ಎಂದರು.
ಪಠ್ಯಪುಸ್ತಕದಿಂದ ಟಿಪ್ಪು ಇತಿಹಾಸ ಕೈಬಿಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಯುಟಿ ಖಾದರ್, ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ತೆಗೆದು ಹಾಕವುದು ಸರಿಯಲ್ಲ. ಟಿಪ್ಪು ಇತಿಹಾಸ ಅಳಿಸಲು ಸಾಧ್ಯವಿಲ್ಲ. ಟಿಪ್ಪು ರಾಜ್ಯಕ್ಕೆ ಮಾತ್ರ ಸೀಮಿತ ಅಲ್ಲ. ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ಬಿಜೆಪಿಯವರು ತೆಗೆದರೂ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲ ಎಂದು ಟಾಂಗ್ ನೀಡಿದರು.
Key words: CM BS Yeddyurappa- Audio Leak –Case- Former minister -UT Khader -demands -CBI