ಮೈಸೂರು,ಆ,21,2020(www.justkannada.in): ಜಿಲ್ಲೆಯ ಎಚ್.ಡಿ ಕೋಟೆ ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು.
ಇದೇ ವೇಳೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಸೇರಿ ಹಲವು ಮಂದಿ ಭಾಗಿಯಾಗಿದ್ದರು.
ಬಳಿಕ ಕಬಿನಿ ಜಲಾಶಯದ ಕೆಳಭಾಗದಲ್ಲಿ ಮೇಲ್ಮಟ್ಟದ ಸೇತುವೆ ಹಾಗೂ ಸಂಪರ್ಕ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗುದ್ದಲಿಪೂಜೆ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಸಚಿವರಾದ ಸೋಮಶೇಖರ್, ರಮೇಶ್ ಜಾರಕಿಹೊಳಿ, ಶಾಸಕರಾದ ಎಸ್.ಎ.ರಾಮದಾಸ್, ಅನಿಲ್ ಚಿಕ್ಜಮಾದು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
key words: CM BS yeddyurappa- bagina- Kabini-Minister-ST Somashekhar.