ಬೆಂಗಳೂರು,ಫೆಬ್ರವರಿ,27,2021(www.justkannada.in): ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ಹುಟ್ಟುಹಬ್ಬದ ಸಂಭ್ರಮವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯಾತಿಗಣ್ಯರು ಶುಭಕೋರಿದ್ದಾರೆ.
ಈ ನಡುವೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಟ್ವೀಟ್ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪಗೆ ಶುಭಹಾರೈಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ, ರಾಜಕೀಯ ಮುತ್ಸದ್ಧಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ರಾಜ್ಯದ ಜನರ, ರೈತ ಬಂಧುಗಳ, ದುರ್ಬಲರ ಆಶೋತ್ತರಗಳಿಗಾಗಿ ದುಡಿಯಲು ಭಗವಂತ ತಮಗೆ ಎಲ್ಲ ರೀತಿಯ ಶಕ್ತಿ ನೀಡಲಿ, ಆಯುರಾರೋಗ್ಯ ಕರುಣಿಸಲಿ ಎಂದು ನಾನು ಈ ಸಂದರ್ಭದಲ್ಲಿ ಆಶಿಸುತ್ತೇನೆ ಎಂದು ಟ್ವೀಟ್ ಮಾಡಿ ಶುಭಕೋರಿದ್ದಾರೆ.

Key words: CM BS Yeddyurappa- Birthday-Former CM- HD Kumaraswamy-greeting