ಬೆಂಗಳೂರು,ನವೆಂಬರ್,18,2020(www.justkannada.in): ರಾಜ್ಯ ಬಿಜೆಪಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಬಾಳಾಠಾಕ್ರೆ ಪುಣ್ಯಸ್ಮರಣೆಯಲ್ಲಿ ಮಾತನಾಡಿದ ಅಜಿತ್ ಪವಾರ್, ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು. ಅಖಂಡ ಮಹಾರಾಷ್ಟ್ರ ನಿರ್ಮಾಣ ಬಾಳಾ ಠಾಕ್ರೆ ಕನಸಾಗಿತ್ತು. ಅಖಂಡ ಮಹಾರಾಷ್ಟ್ರ ಕನಸು ನನಸು ಮಾಡುತ್ತೇವೆ ಎಂದು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿದ್ದು ಇದಕ್ಕೆ ಕರ್ನಾಟಕದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.
‘ಮಹಾ’ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಖಂಡನೆ…
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಗೆ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಖಂಡಿಸಿದ್ದಾರೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಅಜಿತ್ ಪವಾರ್ ಹೇಳಿಕೆ ಖಂಡಿಸುತ್ತೇನೆ. ಪವಾರ್ ಖ್ಯಾತೆ ತೆಗೆಯಲು ಈ ರೀತಿ ಹೇಳಿಕೆ ನೀಡಿದ್ದಾರೆ. ಜನರಲ್ಲಿ ಗೊಂದಲ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ. ಮಹಾಜನ್ ವರದಿಯೇ ಅಂತಿಮ ಎಂದು ಇಡಿ ಜಗತ್ತಿಗೆ ಗೊತ್ತು. ಆದರೂ ಅಜಿತ್ ಪವಾರ್ ಉದ್ಧಟತನದ ಮಾತುಗಳನ್ನಾಡಿ ಗೊಂದಲ ಸೃಷ್ಠಿಸುತ್ತಿದ್ದಾರೆ ಎಂದು ಕಿಡಿಕಾರಿದರು.
Key words: CM BS Yeddyurappa- condemns -Maharashtra -DCM- Ajit Pawar’s- statement