ಬೆಂಗಳೂರು,ಡಿಸೆಂಬರ್,22,2020(www.justkannada.im): ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ.
ಪ್ರಕರಣ ರದ್ಧು ಕೋರಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ಧ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಬೆಳ್ಳಂದೂರು ಡಿನೋಟಿಫಿಕೇಷನ್ ಸಂಬಂಧ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಖಾಸಗಿ ದೂರು ಸಲ್ಲಿಸಿದ್ದರು.
ನಂತರ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಸೂಚನೆ ನೀಡಿತ್ತು. 2015 ರಲ್ಲಿ ಲೋಕಾಯುಕ್ತ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು. ಈ ನಡುವೆ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರ ವಿರುದ್ದವೂ ಪ್ರಕರಣ ದಾಖಲಾಗಿತ್ತು. ಆದರೆ ಆರ್ ವಿ ದೇಶಪಾಂಡೆ ವಿರುದ್ಧದ ಕೇಸ್ ಅನ್ನ ರದ್ದುಪಡಿಸಿತ್ತು.
2007-08ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್ ಫೀಲ್ಡ್ ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬುದಾಗಿ ಅವರ ವಿರುದ್ಧ, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಪ್ರಕರಣ ರದ್ದು ಕೋರಿ, ಯಡಿಯೂರಪ್ಪ ಅವರ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ನಡುವೆ ಪ್ರಕರಣ ರದ್ಧುಕೋರಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ಧ ಅರ್ಜಿಯನ್ನ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: CM BS yeddyurappa- denotification case-High Court – dismiss -pettition