ಬೆಂಗಳೂರು,ಸೆ,11,2019(www.justkannada.in): ಸಂಚಾರಿ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಜನಸಾಮಾನ್ಯರಿಗೆ ದುಬಾರಿ ದಂಡದಿಂದ ತೀವ್ರ ತೊಂದರೆಯಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಸೂಚನೆ ನೀಡಿದರು.
ಸಂಚಾರ ನಿಯಮ ಹಾಗೂ ಮೋಟಾರು ವಾಹನ ಕಾಯಿದೆ ಉಲ್ಲಂಘನೆ ಸಂಬಂಧಿಸಿದಂತೆ ದಂಡದ ಮೊತ್ತವನ್ನು ಇಳಿಸುವ ಬಗ್ಗೆ ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರೀಶಿಲನೆ ನಡೆಸಿ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗುಜರಾತ್, ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಸಹ ಟ್ರಾಫಿಕ್ ನಿಯಮಾವಳಿ ಉಲ್ಲಂಘನೆ ದಂಡದ ಪ್ರಮಾಣವನ್ನು ಕಡಿಮೆಗೊಳಿಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುತ್ತದೆ. ಈ ಸಂಬಂಧ ಇಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದ್ದೇವೆ. ಜನಸಾಮಾನ್ಯರಿಗೆ ಹೊರೆಯಾಗದಂತೆ ದಂಡದ ಪ್ರಮಾಣ ಕಡಿಮೆ ಮಾಡಿ, ಕಾನೂನು ಅನುಷ್ಟಾನಗೊಳಿಸುವುದು ನಮ್ಮ ಉದ್ದೇಶ. ಗುಜರಾತ್ ನಿಂದ ವರದಿ ತರಿಸಿಕೊಳ್ಳುತ್ತೇವೆ ಎಂದರು.
Key words: CM BS Yeddyurappa -instructs -Transport Department -officials – reduce- traffic fines