ಬೆಂಗಳೂರು,ಜನವರಿ,12,2021(www.justkannada.in): ರಾಜ್ಯ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಜನವರಿ 13 ಅಥವಾ 14 ರಂದು ಸಂಪುಟ ವಿಸ್ತರಣೆ ಮಾಡುವುದು ನಿಶ್ಚಿತ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಮಧ್ಯೆ ಸಂಪುಟ ವಿಸ್ತರಣೆ ವೇಳೆ ಕೆಲವರಿಗೆ ಕೋಕ್ ನೀಡುವ ಸಾಧ್ಯತೆ ಇದೆ. ಸಚಿವ ಹೆಚ್.ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡುವ ವದಂತಿ ಹಬ್ಬಿದ ಹಿನ್ನೆಲೆ ಸಚಿವ ಹೆಚ್. ನಾಗೇಶ್ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದಾರೆ.

ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಸಚಿವ ಹೆಚ್ ನಾಗೇಶ್ ಭೇಟಿಯಾಗಿದ್ದು ಈ ಭೇಟಿ ಮಹತ್ವ ಪಡೆದುಕೊಂಡಿದೆ. ಇನ್ನು ಇದೇ ವೇಳೆ ಶಾಸಕ ಅರವಿಂದ ಬೆಲ್ಲದ್ ಸಹ ಸಿಎಂ ಬಿಎಸ್ ವೈ ಅವರನ್ನ ಭೇಟಿಯಾಗಿದ್ದಾರೆ ಎನ್ನಲಾಗಿದೆ.
Key words. CM- BS Yeddyurappa- Minister- H. Nagesh.