ಬೆಂಗಳೂರು,ಅಕ್ಟೋಬರ್,21,2020(www.justkannada.in): ಬಿಎಸ್ ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಒಬ್ಬ ದುರಂತ ನಾಯಕ. ಯತ್ನಾಳ್ ಹುಚ್ಚು ಹುಚ್ಚಾಗಿ ಮಾತನಾಡಿದರೇ ಜನರು ಒಪ್ಪುವುದಿಲ್ಲ. ಯತ್ನಾಳ್ ವಿರುದ್ಧ ಪಕ್ಷ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ಯತ್ನಾಳ್ ನಡೆ ಸರಿಯಿಲ್ಲ. ಪಕ್ಷ ಇದನ್ನ ಸಿರಿಯಸ್ ಆಗಿ ತೆಗೆದುಕೊಳ್ಳಬೇಕು. ಯತ್ನಾಳ್ ಸಿಎಂ ಆಗೋಕೆ ಸಾಧ್ಯವಿಲ್ಲ. ಅವರು ಸಿಎಂ ಬಳಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಬಿಎಸ್ ಯಡಿಯೂರಪ್ಪ ಅವರನ್ನ ಶಾಸಕಾಂಗ ಪಕ್ಷ ಸಿಎಂ ಮಾಡಿದೆ. ಆದರೆ ತನ್ನನ್ನ ಮಂತ್ರಿ ಮಾಡಲಿಲ್ಲ ಎಂಬ ಕಾರಣಕ್ಕೆ ಯತ್ನಾಳ್ ಈ ರೀತಿ ಹೇಳುತ್ತಿದ್ದಾರೆ. ಯತ್ನಾಳ್ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದರು.
Key words: cm bs yeddyurappa- MLA-Basanagowda patil yatnal- statement-MP renukacharaya