ಬೆಂಗಳೂರು,ಅಕ್ಟೋಬರ್,24,2020(www.justkannada.in): ಬೆಂಗಳೂರಿನಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.
ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಡ್ಸ್ ಕೈಗೊಂಡಿದ್ದು ಮೊದಲು ನಗರದ ಹೊಸಕೆರೆಹಳ್ಳಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಿಎಂ ಬಿಎಸ್ ಯಡಿಯೂರಪ್ಪಗೆ ಕಂದಾಯ ಸಚಿವ ಆರ್.ಅಶೋಕ್ ಸಾಥ್ ನೀಡಿದರು.
ಮಳೆಹಾನಿ ಬಗ್ಗೆ ಅಧಿಕಾರಿಗಳು ಮತ್ತು ಸಂತ್ರಸ್ತರಿಂದಲೂ ಮಾಹಿತಿ ಪಡೆದ ಸಿಎಂ ಬಿಎಸ್ ಯಡಿಯೂರಪ್ಪ, ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ತಲಾ 25 ಸಾವಿರ ಪರಿಹಾರ ಘೋಷಿಸಿದ್ದೇವೆ. ಮನೆ ಮನೆಗೂ ತೆರಳಿ ಪರಿಹಾರ ನೀಡ್ತೇವೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಸಚಿವ ಆರ್ ಅಶೋಕ್ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ. ರಾಜಕಾಲುವೆ ಒತ್ತುವರಿ ಎರಡು ಮೂರು ದಿನಗಳಲ್ಲಿ ತೆರವುಗೊಳಿಸುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
Key words: CM BS Yeddyurappa- visit-inspect-Bangalore- rain -areas