ಬೆಂಗಳೂರು, ಡಿಸೆಂಬರ್ 02, 2020 (www.justkannada.in): ಫೆ.25ರಂದು 13ನೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಹಮ್ಮಿಕೊಳ್ಳಬೇಕಿದೆ. ಅದಕ್ಕಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು , ಮುಖ್ಯಮಂತ್ರಿಗಳು ಒಪ್ಪಿಗೆ ಕೊಟ್ಟಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧಕ್ಷ ಸುನಿಲ್ ಪುರಾಣಿಕ್ ಹೇಳಿದ್ದಾರೆ.
ನಗರದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಏರ್ಪಡಿಸಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಅವರು ಈ ವಿಷಯ ತಿಳಿಸಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧಕ್ಷ ಸುನಿಲ್ ಪುರಾಣಿಕ್ ನೇತೃತ್ವದಲ್ಲಿ ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ವಿದ್ಯಾಶಂಕರ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶೃತಿ, ಹಿರಿಯ ಪತ್ರಕರ್ತ ಮುರುಳೀಧರ್ ಕಜಾನೆ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ನಿಮಾರ್ಪಕ ಲಿಂಗದೇವರು ಅವರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು.
ಅದರಲ್ಲಿ ಕೇವಲ 45 ಉತ್ಸವಗಳಿಗೆ ಮಾತ್ರ ಅಂತಾರಾಷ್ಟ್ರೀಯ ಮಾನ್ಯತೆ ಸಿಗುತ್ತದೆ. ಅದರಲ್ಲಿ ನಮ್ಮ ಬೆಂಗಳೂರು ಕೂಡಾ ಒಂದು. ಇದು ನಮಗೆ ಹೆಮ್ಮೆಯ ವಿಷಯ ಎಂದು ತಿಳಿಸಿದ್ದಾರೆ.