ಮೈಸೂರು, ನವೆಂಬರ್,4,2020(www.justkannada.in): ಉಪಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಮಾಜಿ ಸಿಎಂ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. I am very confident ಯಡಿಯೂರಪ್ಪ ಬದಲಾಗ್ತಾರೆ. ನನಗೆ ದೆಹಲಿಯಿಂದಿರುವ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು. ಅದು ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ತಿಳಿಸಿದರು.
ಅಮೆರಿಕಾದಲ್ಲಿ ಮೋದಿ ಹೆಸರು ನಡೆಯೋದಿಲ್ಲ. ಟ್ರಂಪ್ ಖಚಿತವಾಗಿ ಸೋಲು ಅನುಭವಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಟ್ರಂಪ್ ಚುನಾವಣೆಯಲ್ಲಿ ಮೋದಿ ಹೆಸರು ಹೋಳಿಕೊಂಡು ಮತ ಕೇಳಿದ್ದರು. ಅಮೆರಿಕಾ ಚುನಾವಣೆಯೇ ಬೇರೆ. ಅಲ್ಲಿನ ಜನ ಮೋದಿ ನೋಡಿ ವೋಟು ಹಾಕಲ್ಲ. ಅನಿವಾಸಿ ಭಾರತೀಯರೂ ಮೋದಿ ಮುಖ ನೋಡಿಕೊಂಡು ವೋಟು ಕೊಡಲ್ಲ. ಭಾರತದಲ್ಲೇ ಮೋದಿ ವಿರುದ್ಧ ಜನಾಭಿಪ್ರಾಯ ಶುರುವಾಗಿದೆ. ದೇಶದ ಅರ್ಥ ವ್ಯವಸ್ಥೆ ಹಾಳು ಮಾಡಿದ್ದಾರೆ. ಜಿಡಿಪಿ ಪಾತಾಳಕ್ಕೆ ಕುಸಿದಿದೆ. ಹೀಗಾಗಿ ಯುವ ಜನರು ಮೋದಿ ವಿರುದ್ಧ ಸಿಟ್ಟು ಹೊರಹಾಕುತ್ತಿದ್ದಾರೆ. ಉತ್ತರ ಪ್ರದೇಶ ಚುನಾವಣೆಯಲ್ಲಿ ನಿತೀಶ್ ಕುನಾರ್ ಮೇಲೆ ಈರುಳ್ಳಿ ಎಸೆದಿದ್ದಾರೆ ಎಂದು ಟೀಕಿಸಿದರು.
Key words: CM -change –state- after- by-election-mysore-Siddaramaiah.