ಮಂಡ್ಯ,ಜುಲೈ,22,2021(www.justkannada.in): ಎರಡು ದಿನದಲ್ಲಿ ಸಿಎಂ ಬದಲಾಗುವುದಾದರೆ ತರಾತುರಿಯಲ್ಲಿ 12 ಸಾವಿರ ಕೋಟಿ ಯೋಜನೆಗೆ ಅನುಮತಿ ನೀಡುತ್ತಿರುವುದು ಯಾಕೆ..? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ನಾಳಿದ್ದು ರಾಜೀನಾಮೆ ನೀಡ್ತಾರೆ ಎನ್ನುತ್ತಿದ್ದಾರೆ, ಅದೇನೋ ನನಗೆ ಗೊತ್ತಿಲ್ಲ. ಆದ್ರೆ ಸಿಎಂ ತರಾತುರಿಯಲ್ಲಿ ಸಾವಿರಾರು ಕೋಟಿಗಳ ಯೋಜನೆಗೆ ಅನುಮತಿ ನೀಡ್ತಿದ್ದಾರೆ. ನೀರಾವರಿ ಇಲಾಖೆಯ 4 ನಿಗಮಗಳಲ್ಲಿ 12 ಸಾವಿರ ಕೋಟಿ ಯೋಜನೆಗೆ ಇವತ್ತಿನ ಸಭೆಯಲ್ಲಿ ಯಡಿಯೂರಪ್ಪ ಅನುಮತಿ ನೀಡ್ತಿದ್ದಾರೆ. 12ಸಾವಿರ ಕೋಟಿ ಯೋಜನೆಯಲ್ಲಿ ಕಾವೇರಿ ನಿಗಮಕ್ಕೆ ಕೇವಲ 1ಸಾವಿರ ಕೋಟಿ. ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಹಳೇ ಕರ್ನಾಟಕ ಭಾಗದಿಂದ ಹೋಗುತ್ತಿದೆ. ನನಗೆ ಹಳೇ ಕರ್ನಾಟಕ ಹೊಸ ಕರ್ನಾಟಕದ ಪ್ರಶ್ನೆ ಅಲ್ಲ. ಆ ಭಾಗಕ್ಕೆ ನೀಡುವ ಆದ್ಯತೆಯನ್ನ ಈ ಭಾಗಕ್ಕೂ ನೀಡಿ. ಇಲ್ಲಿನ ಜನ ನಿಮಗೇನು ದ್ರೋಹ ಮಾಡಿದ್ದಾರೆ. ಈ ಭಾಗಕ್ಕೆ 1 ಸಾವಿರ ಕೋಟಿ ಆ ಭಾಗಕ್ಕೆ 11ಸಾವಿರ ಕೋಟಿ ಯೋಜನೆ. ನಿಜವಾಗಲೂ ಆ ಭಾಗದ ಜನರಿಗೆ ನೀರು ಕೊಡಲು ಯೋಜನೆ ರೂಪಿಸಿದ್ದೀರಾ.? ಎಂದು ಕಿಡಿಕಾರಿದರು.
ದುಡ್ಡು ಹೊಡೆಯುವ ಯೋಜನೆ ನಿಮ್ಮದು. ಎರಡು ದಿನದಲ್ಲಿ ಸಿಎಂ ಬದಲಾಗುವುದಾದರೆ ತರಾತುರಿಯಲ್ಲಿ 12ಸಾವಿರ ಕೋಟಿ ಯೋಜನೆ ಯಾಕೆ.? ಎಂದು ಪ್ರಶ್ನಿಸಿದ ಹೆಚ್.ಡಿ ಕುಮಾರಸ್ವಾಮಿ, ಅವರಿಗೆ ದರದ್ರ ಏನಿದೆ, ಯಾವ ಕಾರಣಕ್ಕಾಗಿ ಈ ತೀರ್ಮಾನ ಮಾಡಿದ್ದಾರೆ. ಈಗಲೂ ದುಡ್ಡು ಹೊಡೆಯಲಿಕ್ಕಾ, ರಾಜ್ಯದ ತೆರಿಗೆ ಹಣ ಲೂಟಿ ಮಾಡಲಿಕ್ಕಾ..? ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಪ್ರಶ್ನಿಸಿದರು.
Key words: CM change – two days-12 thousend crore-plan-Question – HD Kumaraswamy.