ಬೆಂಗಳೂರು,ಮೇ,19,2023(www.justkannada.in): ನಾಳೆ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದು, ಸಮಾರಂಭಕ್ಕಾಗಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದ್ದುಕ್ರೀಡಾಂಗಣ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ವಿವಿಐಪಿಗಳ ಪ್ರವೇಶಕ್ಕೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗಿದೆ. 2 ಗೇಟ್ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಪೊಲೀಸ್ ಕಮಿಷನರ್, ಇಬ್ಬರು ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಲಾಗಿದ್ದು, 8 ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್ ಪೆಕ್ಟರ್ಗಳು, 1,500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: CM-CM- swearing- ceremony – Police –tight-security-bangalore