ಬೆಂಗಳೂರು,ಮಾರ್ಚ್,29,2022(www.justkannada.in): ಇತ್ತೀಚೆಗೆ ಕಾಂಗ್ರೆಸ್ ತೊರೆದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿಎಂ ಇಬ್ರಾಹಿಂ ಈಗಾಗಲೇ ಜೆಡಿಎಸ್ ಸೇರ್ಪಡೆ ಬಗ್ಗೆ ಸುಳಿವು ನೀಡಿದ್ದಾರೆ.
ಈ ಮಧ್ಯೆ ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಿಎಂ ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆ ಪಕ್ಷ ಸೇರ್ಪಡೆಗೆ ದಿನಾಂಕ ನಿಗದಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಸಿಎಂ ಇಬ್ರಾಹಿಂ ಅವರನ್ನ ಸಮಾವೇಶ ಮಾಡಿ ಜೆಡಿಎಸ್ ಗೆ ಬರಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಎಂಎಲ್ ಸಿ ಆಗಿದ್ದ ಸಿಎಂ ಇಬ್ರಾಹಿಂ ಪರಿಷತ್ ವಿಪಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಆದರೆ ಬಿ.ಕೆ ಹರಿಪ್ರಸಾದ್ ಅವರನ್ನ ಪರಿಷತ್ ವಿಪಕ್ಷ ನಾಯಕನನ್ನಾಗಿ ಮಾಡಿದ ಹಿನ್ನೆಲೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದು, ಜೆಡಿಎಸ್ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
Key words: CM Ibrahim-former CM-HD Kumaraswamy