ಬೆಂಗಳೂರು,ಮೇ,16,2023(www.justkannada.in): ರಾಜ್ಯದ ಸಿಎಂ ಹುದ್ದೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ನಡುವೆ ಪೈಪೋಟಿ ಏರ್ಪಟ್ಟಿದ್ದು ಇಬ್ಬರೂ ಸಹ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಈ ಸಂಬಂಧ ಇಬ್ಬರೂ ನಾಯಕರಿಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಪರೋಕ್ಷ ಟಾಂಗ್ ನೀಡಿದ್ದಾರೆ.
ತಮಗೆ ಕಳೆದ ಬಾರಿ ಆದ ಅನ್ಯಾಯವನ್ನ ಈ ಬಾರಿ ಹೈಕಮಾಂಡ್ ಸರಿ ಮಾಡುತ್ತದೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಡಾ.ಜಿ.ಪರಮೇಶ್ವರ್, ನಾನು ಪಕ್ಷದ ವರಿಷ್ಠರನ್ನು ನಂಬಿದ್ದೇನೆ. ನಾನು ಕೂಡ 50 ಶಾಸಕರ ಗುಂಪು ಕಟ್ಟಿಕೊಂಡು ಹೋಗಬಹುದು. ಆದರೆ ನಾನು ಹಾಗೆ ಮಾಡುವುದಿಲ್ಲ. ಹೈಕಮಾಂಡ್ ಜವಾಬ್ದಾರಿ ಕೊಟ್ಟರೆ ಖಂಡಿತ ಮಾಡುತ್ತೇನೆ. ಅವಕಾಶ ಕೊಟ್ಟರೆ ಮಾಡೊಲ್ಲ ಅಂತ ಹೇಳೊಲ್ಲ. ಲಾಬಿ ಮಾಡಬಾರದು ಅಂತ ಸುಮ್ಮನೆ ಇದ್ದೇನೆ. ಸುಮ್ಮನೆ ಇದ್ದೇನೆ ಅಂದರೆ ಅಸಮರ್ಥ ಅಂತ ಅಲ್ಲ. ಎನ್ನುವ ಮೂಲಕ ಪರೋಕ್ಷವಾಗಿ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದರು.
ಇನ್ನು ಮೊದಲ ಸಚಿವ ಸಂಪುಟ ಸಭೆಯಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಮೊದಲ ಕ್ಯಾಬಿನೆಟ್ನಲ್ಲಿ ಜಾರಿ ಮಾಡುತ್ತೇವೆ. ಕಾಂಗ್ರೆಸ್ ನ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತವೆ. ಹಾಗೆ ಸುಮ್ಮನೆ ಕೊಟ್ಟರೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಕೆಲ ಷರತ್ತುಗಳು ಇರುತ್ತವೆ ಎಂದು ಪರಮೇಶ್ವರ್ ತಿಳಿಸಿದರು.
Key words: CM-Position- competent – Dr. G. Parameshwar