ಸಿಎಂ ನಿವಾಸಕ್ಕೆ ಮುತ್ತಿಗೆಗೆ ಯತ್ನ: ಬಿಜೆಪಿ ನಾಯಕರು ವಶಕ್ಕೆ

ಬೆಂಗಳೂರು,ಜುಲೈ,3,2024 (www.justkannada.in):   ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಭ್ರಷ್ಟಾಚಾರ, ಮುಡಾ ಅಕ್ರಮ ಹಾಗೂ ಬೆಲೆ ಏರಿಕೆ ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಬಿಜೆಪಿ ನಾಯಕರನ್ನ ವಶಕ್ಕೆ ಪಡೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಎಂ.ಎಲ್.ಸಿ ಸಿ.ಟಿ ರವಿ, ಶಾಸಕರಾದ ಅರಗ ಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್ ಸೇರಿದಂತೆ ಹಲವು ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ.

ಇದೇ ವೇಳೆ ಸಿಎಂ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಮುತ್ತಿಗೆ ಯತ್ನಿಸಿದ್ದು,  ಈ ವೇಳೆ ಬಿಜೆಪಿ ನಾಯಕರನ್ನು ತಡೆದ ಪೊಲಿಸರು ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ, ಸುನೀಲ್ ಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದರು.

Key words:CM, residence, BJP, leaders, protest