ಬೆಂಗಳೂರು,ಏಪ್ರಿಲ್,18,2025 (www.justkannada.in): ನಿನ್ನೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಏರು ಧ್ವನಿಯಲ್ಲಿ ಮಾತನಾಡಿದ್ದು ಜಟಾಪಟಿ ನಡೆದಿದೆ ಎಂದು ವರದಿಯಾದ ಹಿನ್ನೆಲೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕ್ಯಾಬಿನೆಟ್ ನಲ್ಲಿ ಜಾತಿಗಣತಿ ಕುರಿತು ಚರ್ಚೆ ಅಪೂರ್ಣಗೊಂಡಿದೆ. ಜಾತಿಗಣತಿ ವರದಿ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಹೇಳಿದ್ದಾರೆ.
ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಏರುಧ್ವನಿಯಲ್ಲಿ ಮಾತನಾಡಿದ್ರು ಅಂತಾ ಬಂದಿದೆ. ಆದರೆ ಅದು ಸುಳ್ಳು. ಜೋರು ಮಾತಿಂದ ಯಾರೂ ಹೇಳಿಲ್ಲ. ಚರ್ಚೆ ಅಪೂರ್ಣವಾಗಿದೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: Discussion, caste census, incomplete, CM Siddaramaiah