ಬೆಂಗಳೂರು,ಏಪ್ರಿಲ್,23,2025 (www.justkannada.in): ನಿನ್ನೆ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮೂವರು ಕನ್ನಡಿಗರು ಸೇರಿ 25ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು ಈ ಮಧ್ಯೆ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ತಾಯ್ನಾಡಿಗೆ ವಾಪಸ್ ಕರೆತರಲು ವಿಶೇಷ ವಿಮಾನ ವ್ಯವಸ್ಥೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
Key words: Terrorist attack, Special flight, Kannadigas, safely , CM Siddaramaiah