ಬೆಳಗಾವಿ,ಏಪ್ರಿಲ್,28,2025 (www.justkannada.in): ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪುಪಟ್ಟಿ ಪ್ರದರ್ಶಿಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾರಂಭಿಸಿದ್ದಾರೆ.
ಈ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನ ಪೊಲೀಸರು ವಶಕ್ಕೆ ಪಡೆದರು. ಇದೇ ವೇಳೆ ಬಿಜೆಪಿ ಕಾರ್ಯಕರ್ತೆಯರ ವಿರುದ್ದ ಕಾಂಗ್ರೆಸ್ ಮುಖಂಡರು ಕಿಡಿಕಾರಿದರು.
ಪೊಲೀಸರ ವಿರುದ್ದ ಸಿಎಂ ಸಿದ್ದರಾಮಯ್ಯ ಗರಂ
ಘಟನೆಯಿಂದ ಗರಂ ಆದ ಸಿಎಂ ಸಿದ್ದರಾಮಯ್ಯ ಕೆಲ ಕಾಲ ಭಾಷಣವನ್ನು ನಿಲ್ಲಿಸಿ, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಯಾರು? ಪೊಲೀಸರು ಏನು ಮಾಡುತ್ತಿದ್ದೀರಾ? ಎಂದು ಕ್ಲಾಸ್ ತೆಗೆದುಕೊಂಡರು. ಹಾಗೆಯೇ ಭಾಷಣ ಮುಂದುವರೆಸಿದ ಸಿದ್ದರಾಮಯ್ಯ ನಾವು ಯಾರಿಗೂ ಹೆದರಲ್ಲ. ಜೈಭೀಮ್ ಜೈ ಬಾಪು ಜೈ ಕಾಂಗ್ರೆಸ್ ಎಂದು ಘೋಷಣೆ ಕೂಗಿದರು.
Key words: BJP, protest, during, CM Siddaramaiah, speech