ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್..?

ಬೆಂಗಳೂರು, ಜನವರಿ,23,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ   ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ ಚಿಟ್‌  ನೀಡಲಾಗಿದೆ ಎಂದು ಟಿವಿ9 ಸುದ್ದಿವಾಹಿನಿ ವರದಿ ಮಾಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ  ವರದಿಯನ್ನ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಟಿವಿ9 ನಲ್ಲಿ ವರದಿಯಾಗಿದೆ.

ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ.  ಡಿನೋಟಿಫೈ ಭೂ ಪರಿವರ್ತನೆ ಮಾಡಬೇಕಾದ್ರೆ ನಿಯಮ ಉಲ್ಲಂಘನೆಯಾಗಿದೆ. ಮುಡಾ ಆಯುಕ್ತರು,  ಕಂದಾಯ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಟಿವಿ9 ವರದಿ ಮಾಡಿದೆ

Key words: Muda case, Lokayukta, Clean chit, CM Siddaramaiah.