ಬೆಂಗಳೂರು,ಫೆಬ್ರವರಿ,17,2025 (www.justkannada.in): ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾರ್ಚ 3 ರಿಂದ ವಿಧಾನ ಮಂಡಲ ಅಧೀವೇಶನ ಪ್ರಾರಂಭವಾಗಲಿದೆ. ಮಾರ್ಚ್ 3 ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಬಜೆಟ್ ಮಂಡನೆ ಮಾಡುತ್ತೇನೆ ಎಂದು ತಿಳಿಸಿದರು.
ಹಾಗೆಯೇ ಬಜೆಟ್ ಮಂಡನೆ ಬಳಿಕ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Key words: State budget, March 7, CM Siddaramaiah