ಮಾ.7ಕ್ಕೆ ರಾಜ್ಯ ಬಜೆಟ್: ಸಿಎಂ ಸಿದ್ದರಾಮಯ್ಯರಿಂದ ಅಂತಿಮ ಹಂತದ ಪೂರ್ವಭಾವಿ ಸಭೆ

ಬೆಂಗಳೂರು,ಫೆಬ್ರವರಿ,25,2025 (www.justkannada.in):  ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆ  ಕಳೆದ ನಾಲ್ಕೈದು ವಾರಗಳಿಂದ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿ ಚರ್ಚೆ ನಡೆಸುತ್ತಿದ್ದಾರೆ.

ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಿಮ ಹಂತದ ಪೂರ್ವಭಾವಿ ಸಭೆ ನಡೆಯುತ್ತಿದೆ. ಸರ್ಕಾರಿ ನಿವಾಸ  ಕಾವೇರಿಯಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಳೆದ 20ರಿಂದ 25 ದಿನಗಳಿಂದಲೂ ಸಿಎಮ ಸಿದ್ದರಾಮಯ್ಯ ವಿವಿಧ ಇಲಾಖೆಗಳ ಜೊತೆ ಸಭೆ ನಡೆಸಿದ್ದು ಇಂದು ಕೊನೆಯ ಹಂತವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸುತ್ತಿದ್ದಾರೆ.

Key words: State Budget, March 7,  CM, Siddaramaiah, meeting