ಬೆಂಗಳೂರು,ಮಾರ್ಚ್,1,2025 (www.justkannada.in): ಬಜೆಟ್ ಅಧಿವೇಶನ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮಾರ್ಚ್ 4 ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮಾರ್ಚ್ 3 ರಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ . ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿದ್ಧತೆ ಆರಂಭಿಸಿದ್ದು, ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸ ಪೂರ್ವಭಾವಿ ಸಭೆಗಳನ್ನು ನಡೆಸಿದ್ದಾರೆ.
ತಮ್ಮ ದಾಖಲೆಯ 16 ನೇ ಬಜೆಟ್ ಅನ್ನು ಮಂಡಿಸಲಿರುವ ಸಿದ್ದರಾಮಯ್ಯ ಬಜೆಟ್ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಇನ್ನು ಬಜೆಟ್ ಅಧಿವೇಶನದ ಹಿನ್ನೆಲೆ ಸಿದ್ದತೆ ನಡೆಸಲು ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದೆ ಎನ್ನಲಾಗಿದೆ.
Key words: CM Siddaramaiah, legislative party, meeting, March 4