ಸಿಎಂ ಸಿದ್ದರಾಮಯ್ಯರಿಂದ ಬಜೆಟ್ ಮಂಡನೆ ಆರಂಭ

ಬೆಂಗಳೂರು,ಮಾರ್ಚ್,7,2025 (www.justkannada.in): ಇಂದು ಸಿಎಂ ಸಿದ್ದರಾಮಯ್ಯ  2025-26ನೇ ಸಾಲಿನ ರಾಜ್ಯ  ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ಮಂಡನೆ ಆರಂಭವಾಗಿದೆ.

ವಿಧಾನಸಭೆಯಲ್ಲಿ  16ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದು ರಾಜ್ಯದ ಜನರಿಗೆ ಸಾಕಷ್ಟು ನಿರೀಕ್ಷೆ ಇದೆ. ಇದಕ್ಕೂ ಮೊದಲು ಬಜೆಟ್ ಮಂಡನೆ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದು ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ‌ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದಿದ್ದಾರೆ.

Key words: Budget, begins, CM Siddaramaiah