ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಕೇಸ್: ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್,5,2025 (www.justkannada.in): ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಾಸಕ ಪೊನ್ನಣ್ಣ ಮತ್ತು ಮಂತರ್ ಗೌಡ ವಿರುದ್ದ ಎಫ್ ಐಆರ್ ಹಾಕುವಂತೆ ಆಗ್ರಹಿಸಿ ಕೊಡಗಿನಲ್ಲಿ ಬಿಜೆಪಿ ನಾಯಕರು ಬೃಹತ್ ಹೋರಾಟಕ್ಕೆ ಮುಂದಾಗಿದ್ದು ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ.   ತನಿಖೆ ನಡೆಯುವಾಗ ಹೆಚ್ಚು ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರ ಬೇಡಿಕೆಯನ್ನ ಒಪ್ಪಲು ಆಗಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ.  ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡಿಕೊಂಡು ಬಂದಿದೆ ಎಂದು ವಾಗ್ದಾಳಿ ನಡೆಸಿದರು.

Key words: BJP worker, Vinay Somanna, suicide case, CM, Siddaramaiah