ಬೆಂಗಳೂರು,ಏಪ್ರಿಲ್,11,2025 (www.justkannada.in): ಏಪ್ರಿಲ್ 17 ರಂದು ನಡೆಯಲಿರುವ ಸಚಿವ ಸಂಪುಟ ವಿಶೇಷ ಸಭೆಯಲ್ಲಿ ಜಾತಿಜನಗಣತಿ ವರದಿ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಮಂಡನೆಯಾಗಿದೆ. ಏಪ್ರಿಲ್ 17 ರಂದು ಸಂಜೆ 4 ಗಂಟೆಗೆ ವಿಶೇಷ ಸಂಪುಟ ಸಭೆ ಕರೆಯಲಾಗಿದೆ. ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ವರದಿ ಕುರಿತು ಚರ್ಚಿಸುತ್ತೇವೆ. ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
Key words: decision, discussing, caste census report, CM Siddaramaiah