ಮೈಸೂರು,ನವೆಂಬರ್,13,2024 (www.justkannada.in): ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ವಸೂಲಿ ಮಾಡಿ ಮಹಾರಾಷ್ಟ್ರ ಚುನಾವಣೆಗೆ ಬಳಸಿದ್ದಾರೆ ಎಂದು ನರೇಂದ್ರ ಮೋದಿ ಅವರು ಸುಳ್ಳು ಆರೋಪ ಮಾಡಿದ್ದಾರೆ. ಈ ಆರೋಪವನ್ನ ಸಾಬೀತು ಮಾಡಿದರೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಬಕಾರಿ ಇಲಾಖೆಯಲ್ಲಿ 700 ಕೋಟಿ ಅಕ್ರಮ ಆಗಿಲ್ಲ. ಅಬಕಾರಿ ಇಲಾಖೆಯಲ್ಲಿ ಅಕ್ರಮ ನಡೆದಿಲ್ಲ ಭ‍್ರಷ್ಟಾಚಾರ ನಡೆಯುವುದಕ್ಕೆ ನಾನು ಬಿಡಲ್ಲ. ಅಕ್ರಮ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ. ಸಾಬೀತು ಮಾಡದಿದ್ದರೇ ಪ್ರಧಾನಿ ಮೋದಿ ನಿವೃತ್ತಿ ಪಡೆಯುತ್ತಾರಾ..? ಎಂದು ಸವಾಲು ಎಸೆದರು.
ಸುಳ್ಳು ಹೇಳಲು ಇತಿಮಿತಿ ಇರಬೇಕು. ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕೋವಿಡ್ ವೇಳೆ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ಅವರ ಸರ್ಕಾರ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದರು.
Key words: CM Siddaramaiah, challenges, PM, Modi