ತುಮಕೂರು,ಡಿಸೆಂಬರ್,2,2024 (www.justkannada.in) ತುಮಕೂರು ತಾಲ್ಲೂಕು ಸೋರೆಕುಂಟೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕು ಸ್ಥಾಪನೆ ನೆರವೇರಿಸಿದರು.
ಇಂದು ಸೋರೆಕುಂಟೆಯಲ್ಲಿ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಕ್ರಿಕೆಟ್ ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಿಲನ್ಯಾಸ ನೆರವೇರಿಸಿದರು. ಜಿಲ್ಲಾಉಸ್ತುವಾರಿ ಸಚಿವ ಪರಮೇಶ್ವರ್, ಕೆ.ಎನ್ ರಾಜಣ್ಣ, ಶಾಸಕ ಎಸ್. ಆರ್ ಶ್ರೀನಿವಾಸ್ , ಡಿಸಿ ಶುಭ ಕಲ್ಯಾಣ್ ಸೇರಿ ಹಲವರು ಉಪಸ್ಥಿತರಿದ್ದರು.
ಒಟ್ಟು 42 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ
ಭೂಮಿ ಪೂಜೆ ನೆರವೇರಿಸದ ಬಳಿಕ ಸಾಂಕೇತಿಕವಾಗಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್, ಕೆಎನ್ ರಾಜಣ್ಣ ಕ್ರಿಕೆಟ್ ಆಡಿದರು.
Key words: CM Siddaramaiah, international cricket stadium, tumkur