ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ- ಸಿಎಂ ಸಿದ್ದರಾಮಯ್ಯ ವಿರುದ್ದ ಸಿಟಿ ರವಿ ಕಿಡಿ

ಬೆಂಗಳೂರು, ಡಿಸೆಂಬರ್ 11,2024 (www.justkannada.in): ಕೇರಳ  ನೆರೆ ಸಂತ್ರಸ್ತರಿಗೆ ಮನೆ ನಿರ್ಮಾಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿರುವ   ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಸಿಎಂ ಸಿದ್ದರಾಮಯ್ಯನವರೇ ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಿ.ಟಿ ರವಿ,  ರಾಜ್ಯ ಸರ್ಕಾರ ‌ಕೇರಳದಲ್ಲಿ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಕೊಡುವ ಭರವಸೆ ನೀಡಿದೆ. ಮಾನವೀಯ ನೆಲೆಯಲ್ಲಿ ಮನೆ ಕಟ್ಟಿಕೊಡುವುದು ಸರಿಯಿದೆ. ಆದರೆ, ಸಿದ್ದರಾಮಯ್ಯ ಅವರ ಈ ನಡೆ ಮಾನವೀಯ ನೆಲೆಯಿಂದ ಕಾಣುತ್ತಿಲ್ಲ. ಇದು ಗುಲಾಮಗಿರಿಯ ಸಂಕೇತ. ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಸಂಸದರಾಗಿದ್ದಾರೆ. ನಮ್ಮ ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ನಿಮಗೆ ಕಾಳಜಿ ಇಲ್ಲ. ನಮ್ಮ ರಾಜ್ಯದಲ್ಲಿ ಇಲ್ಲಿ ಬಾಣಂತಿಯರ ಸಾವು, ಎತ್ತಿನಹೊಳೆ ಯೋಜನೆ ಸಂಬಂಧ ಅಧಿಕಾರಿ ಜೊತೆ ಜಗಳ ಮಾಡಿ ರೈತರೊಬ್ಬರು ಹೊಳೆಗೆ ಹಾರಿ ಸಾವನ್ನಪ್ಪಿದ್ದಾರೆ. ಆದರೆ ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡುತ್ತೇವೆ. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ

ಸಿದ್ದರಾಮಯ್ಯ ಮೇಲೆ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಉತ್ತರ ನೀಡುವಲ್ಲೇ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ವ್ಯಸ್ತರಾಗಿದ್ದಾರೆ. ನಿಮ್ಮ ರಕ್ಷಣೆ ಮಾಡಿಕೊಳ್ಳಲು ನೀವು ಮಾಡುವ ಕೆಲಸವನ್ನು ರಾಜ್ಯದ ವಿಷಯಗಳಿಗೆ ಮಾಡುತ್ತಾ ಇಲ್ಲ ಎಂದು ಸಿಟಿ ರವಿ  ಹರಿಹಾಯ್ದಿದ್ದಾರೆ.

Key words: Wayanad, slavery, CM Siddaramaiah, CT Ravi