ಬೆಂಗಳೂರು,ಡಿಸೆಂಬರ್,10,2024 (www.justkannada.in): ಮಾಜಿ ಸಿಎಂ ಸಿದ್ದರಾಮಯ್ಯ ಇಂದು ವಿಧಿವಶರಾದ ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.
ಚಳಿಗಾಲ ಅಧಿವೇಶನದ ಕಲಾಪ ಮುಗಿದ ಬಳಿಕ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಸದಾಶಿವನಗರದ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ತೆರಳಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಸಿಎಂ ಜೊತೆ ಗೃಹ ಸಚಿವ ಪರಮೇಶ್ವರ್ ಸಹ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್ ಎಂ ಕೃಷ್ಣ ಅವರು ರಾಜಕೀಯ ಮುತ್ಸದ್ಧಿ. 6 ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಐಟಿ ಬೆಳವಣಿಗೆಗೆ ಎಸ್ಎಂ ಕೃಷ್ಣ ಅವರ ಕೊಡುಗೆ ಅಪಾರ. ಬೆಂಗಳೂರು ಸಿಲಿಕಾನ್ ವ್ಯಾಲಿ ಆಗಲು ಎಸ್ ಎಂ ಕೃಷ್ಣ ಅವರು ಕಾರಣ. ಸಿಎಂ ಆಗಿ, ವಿದೇಶಾಂಗ ಸಚಿವರಾಗಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ ಕುಮಾರ್ ಅಪಹರಣ, ಕಾವೇರಿ ವಿವಾದ ಆನೇಕ ಸಮಸ್ಯೆನ್ನ ಜಾಣ್ಮೆಯಿಂದ ನಿಭಾಯಿಸಿದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.
Key words: CM Siddaramaiah, Former CM, SM Krishna