ಆಸಿಡ್ ದಾಳಿಗೆ ಒಳಗಾಗಿದ್ದ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು, ಜೂನ್, 30,2023(www.justkannada.in):  ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಸಿಎಂ ಸಿದ್ಧರಾಮಯ್ಯ, ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ ನೀಡಿದರು.  2022ರ ಏಪ್ರಿಲ್ 28 ರಂದು ಆಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆ ಎಂ.ಕಾಂ ಪದವೀಧರೆ ಆಗಿದ್ದಾರೆ. ತಂದೆ ಮತ್ತು ತಾಯಿಯ ಜತೆ ಜನತಾ ದರ್ಶನಕ್ಕೆ ಬಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲೂ ಉದ್ಯೋಗದ ಮನವಿ ಮಾಡಿದ್ದೆವು. ಅವರು ಭರವಸೆ ನೀಡಿದ್ದರು. ಆದರೆ ಉದ್ಯೋಗ ಮಾತ್ರ ಕೊಡಲಿಲ್ಲ ಎಂದು ಅಳಲು ತೋಡಿಕೊಂಡರು.

ಅಹವಾಲು ಸ್ವೀಕರಿಸಿದ  ಸಿಎಂ ಸಿದ್ಧರಾಮಯ್ಯ ತಮ್ಮ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ವಾಮಿ ವೇಷದಲ್ಲಿ ಆರೋಪಿ: ಭಕ್ತರ ವೇಷದಲ್ಲಿ ಪೊಲೀಸರು

ಆಸಿಡ್ ದಾಳಿ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು, ಆರೋಪಿ ಸ್ವಾಮಿ ವೇಷದಲ್ಲಿ ತಿರುವಣ್ಣಾಮಲೈ ಆಶ್ರಮದಲ್ಲಿ ತಲೆ ಮರೆಸಿಕೊಂಡಿರುವುದನ್ನು ಪತ್ತೆ ಹಚ್ಚಿದರು. ಬಳಿಕ ಭಕ್ತರ ವೇಷದಲ್ಲಿ ಹೋಗಿ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿ ಬೆಂಗಳೂರು ಜೈಲಿನಲ್ಲಿದ್ದಾನೆ. ಸಂತ್ರಸ್ಥೆ ಚಿಕಿತ್ಸೆ ಪಡೆಯುತ್ತಾ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡಲಾಗಿದೆ.

ENGLISH SUMMARY..

Chief Minister Siddaramaiah offers job to acid attack victim at CM secretariat

Bengaluru, June 30 : Chief Minister Siddaramaiah has directed officials to offer a job in his secretariat to a victim of acid attack.

The Chief Minister, while hearing to the public grievances at his residence, promised employment on the spot after hearing the plight of the victim.

The victim who was attacked on April 28, 2022 is an M.Com graduate. She with her parents appealed for a job to chief minister during Janata Darshan.

They had also appealed the then Chief Minister Bommai for employment. He only promised, but did not give a job to the victim, they said.

Hearing the plea of the victim, the Chief Minister directed the officials to give her job on contract basis in his ministry.

box

Accused in the guise of Swami, police in the guise of devotees

A case was registered in Kamakshipalya police station regarding acid attack. The police arrested the accused who was hiding in the Thiruvannamalai Ashram in the guise of Swami. At present the accused is in Bangalore jail. The victim is under treatment which is supported by the Chief Minister’s Relief Fund.

Key words: CM- Siddaramaiah – given -employment – his ministry- attacked – Acid victim