ನಟ ದರ್ಶನ್ ಬಂಧನ ಕುರಿತು ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ.

 

ಬೆಂಗಳೂರು,ಜೂನ್,11,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಂದ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ಬಗ್ಗೆ ಮಾಹಿತಿ ನೀಡಿದರು.

ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ ವಿಚಾರಣೆ- ಪೊಲೀಸ್ ಆಯುಕ್ತ ಬಿ. ದಯಾನಂದ್

ಇನ್ನು ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ರೇಣುಕಾಸ್ವಾಮಿ  ಕೊಲೆ ಕೇಸ್ ನಲ್ಲಿ ನಟ ದರ್ಶನ್ ಸಹಚರರು ಅರೆಸ್ಟ್ ಮಾಡಲಾಗಿತ್ತು. ಜೂನ್ 9 ರಂದು ಸಿಕ್ಕ ಅಪರಿಚಿತ ಶವದ ಬಗ್ಗೆ ತನಿಖೆ ನಡೆಸಲಾಗುತ್ತಿತ್ತು. ದೆಹದ ಮೇಲಿನ ಗಾಯ ಗುರುತಿಸಿ ತನಿಖೆ ನಡೆಸಲಾಗಿತ್ತು.  ಮೃತ ವ್ಯಕ್ತಿ ರೇಣುಕಾಸ್ವಾಮಿ ಎಂದು ಗೊತ್ತಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ದರ್ಶನ್ ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Key words: CM Siddaramaiah, information, Darshan, arrest