ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಭಾಗಿ: ರಾಜೀನಾಮೆ ನೀಡಲಿ-ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ನವದೆಹಲಿ,ಜುಲೈ,10,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್  ತೆಲಂಗಾಣ ಚುನಾವಣೆಗೆ ಹಣ ಖರ್ಚು ಮಾಡಿದೆ. ಹೈದರಾಬಾದ್ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಹೈದರಾಬಾದ್ ಬಾರ್ ಟೆಂಟ್ ಹೌಸ್ ಗಳಿಗೆ ಹಣ ವರ್ಗಾವಣೆಯಾಗಿದೆ.  ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಾರದೆ ವರ್ಗಾವಣೆಯಾಗಲು ಸಾಧ್ಯವಿಲ್ಲ ಈ  ಪ್ರಕರಣದಲ್ಲಿ ಸಿದ್ದರಾಮಯ್ಯ ನೇರ ಭಾಗಿಯಾಗಿದ್ದಾರೆ. ಹೈಕಮಾಂಡ್ ಟಾರ್ಗೆಟ್ ಕೊಟ್ಟ ಕಾರಣ ಹಣ ವರ್ಗಾವಣೆ ಮಾಡಿದ್ದಾರೆ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಿಬಿಐ ಅಧಿಕಾರಿಗಳಿಗೆ ಎಸ್ ಐಟಿ ಯಾವುದೇ ಫೈಲ್ ಕೊಡುತ್ತಿಲ್ಲ. ಬೇರೆ ಬೇರೆ ನಿಗಮಗಳಲ್ಲೂ ಇದೇ ರೀತಿ ಹಣ ವರ್ಗಾವಣೆಯಾಗಿದೆ ಎಸ್. ಸಿ, ಎಸ್ಟಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿದ್ದಾರೆ.  ಭಾರಿ ದೊಡ್ಡ ಅವ್ಯವಹಾರ ಕರ್ನಾಟಕದಲ್ಲಿ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ  ವಾಗ್ದಾಳಿ ನಡೆಸಿದರು.

Key words: CM Siddaramaiah, involved, Shobha Karandlaje