ಬೆಂಗಳೂರು,ನವೆಂಬರ್,27,2023(www.justkannada.in): ಸಿಎಂ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಏರ್ಪಡಿಸಿ ಜನರ ಸಮಸ್ಯೆಗಳನ್ನ ಆಲಿಸಿ ಕ್ರಮಕ್ಕೆ ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚಿಸುತ್ತಿದ್ದಾರೆ.
ಜನತಾ ದರ್ಶನದಲ್ಲಿ ಸಾವಿರಾರು ಜನರು ತಮ್ಮ ತಮ್ಮ ಸಮಸ್ಯೆಗಳನ್ನ ಸಿಎಂ ಬಳಿಗೆ ಹೊತ್ತು ತಂದಿದ್ದಾರೆ. ಈ ನಡುವೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಸೀಮಾ. ಬಾನು ಅವರು ಜಿಲ್ಲಾ ಪಂಚಾಯಿತಿ ತಮ್ಮ ಮನೆಯನ್ನು ಅಕ್ರಮವಾಗಿ ಪ್ರವೇಶ ಮಾಡಿರುವ ಬಗ್ಗೆ ದೂರು ಸಲ್ಲಿಸಿದರು.
ಹಾಗೆಯೇ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಡಿ.ಪಿ.ಭಾಗ್ಯ ಅವರ ಮನೆ ಶೇ 60 % ಹಾನಿಯಾಗಿದ್ದು ಶೇ 100 ರ ಪರಿಹಾರ ಒದಗಿಸಿಕೊಡುವಂತೆ ಡಿಪಿ ಭಾಗ್ಯ ಅವರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು .
ಈ ಮನವಿಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಸಮಸ್ಯೆಯನ್ನು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
Key words: CM Siddaramaiah-janathadarshan- instructs -take action.