ಕೆಆರ್ ಎಸ್ ಜಲಾಶಯಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಮಂಡ್ಯ, ಜುಲೈ, 29,2024 (www.justkannada.in): ಕಾವೇರಿ ಜಲಾನಯನ  ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ  ಕೆಆರ್ ಎಸ್ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ  ಇಂದು ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ ಎಸ್ ಜಲಾಶಯಕ್ಕೆ​​ ಬಾಗಿನ ಅರ್ಪಿಸಲಿದ್ದಾರೆ‌.

ಎರಡು ವರ್ಷಗಳ ನಂತರ ಹಳೇ ಮೈಸೂರು ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಕಾವೇರಿ ಮಾತೆಗೆ ಪೂಜೆ ಸಲ್ಲಿಸಲಿದ್ದಾರೆ.

ಇನ್ನು ಸಿಎಂ ಸಿದ್ದರಾಮಯ್ಯ ತಮ್ಮ ಅವಧಿಯಲ್ಲಿ ಮೂರನೇ ಬಾರಿಗೆ ಕೆಆರ್​ಎಸ್​ಗೆ ಬಾಗಿನ ಅರ್ಪಿಸುತ್ತಿದ್ದಾರೆ. ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಬಾಗಿನ ಅರ್ಪಿಸಿದ್ದರು.  ಬಾಗೀನ ಅರ್ಪಣೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ದತೆಯನ್ನ ಮಾಡಿಕೊಂಡಿದೆ.  ಸಿಎಂ ಸಿದ್ದರಾಮಯ್ಯ ಇಂದು ಕಬಿನಿ ಜಲಾಶಯಕ್ಕೂ ಬಾಗಿನ ಅರ್ಪಣೆ ಮಾಡಲಿದ್ದಾರೆ.

Key words: CM Siddaramaiah, KRS Reservoir, bagina