ಬೆಂಗಳೂರು,ಮೇ,23,2023(www.justkannada.in): ಏಪ್ರಿಲ್, ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತದೆ. ಈ ಬಾರಿ ವಾಡಿಕೆಗಿಂತ ಶೇಕಡಾ 10ರಷ್ಟು ಹೆಚ್ಚು ಮಳೆಯಾಗಿದೆ. ಅದ್ದರಿಂದ ಪ್ರಾಕೃತಿಕ ವಿಕೋಪ ತಡೆ ಮತ್ತು ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ , ಪ್ರಾಕೃತಿಕ ವಿಕೋಪ ತಡೆಗೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.
ಮುಂಗಾರು ಆರಂಭವಾಗುತ್ತಾ ಇದೆ. ಹೀಗಾಗಿ ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ. ನಾನು ಕೇವಲ ಸೂಚನೆ ಕೊಡುತ್ತಿಲ್ಲ, ಎಚ್ಚರಿಕೆ ನೀಡುತ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂಗಾರು ಪೂರ್ವ ಮಳೆಯಿಂದ 52 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. 332 ಜಾನುವಾರು ಮೃತಪಟ್ಟಿವೆ, 814 ಮನೆಗಳಿಗೆ ಹಾನಿಯಾಗಿದೆ. ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Key words: CM- Siddaramaiah –meeting-DC-CEO-instructs