ರಾಜ್ಯಪಾಲರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್, ​​9,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಾಕಷ್ಟು ಜಟಾಪಟಿ ನಡುವೆ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ರನ್ನು ಭೇಟಿ  ಮಾಡಿದ್ದಾರೆ.

ಬೆಂಗಳೂರಿಗೆ ಮಾಲ್ಡೀವ್ಸ್ ಅಧ್ಯಕ್ಷರ ಭೇಟಿ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.  ಈ ಹಿನ್ನೆಲೆಯಲ್ಲಿ ರಾಜ್ಯಪಾಲರ ಆಹ್ವಾನ ಮೇರೆಗೆ ರಾಜಭವನಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಈ ವೇಳೆ  ರಾಜ್ಯಪಾಲ ಥಾವರ್ ಚಂದ್  ಭೇಟಿಯಾಗಿ ನಗುಮುಖದಿಂದಲೇ ಕೈಕುಲುಕಿ ಕುಶಲೋಪರಿ ವಿಚಾರಿಸಿದರು.

ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ  ಸಾಕಷ್ಟು ಸದ್ದು ಮಾಡಿದ್ದು,  ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಆದೇಶಿಸಿದ್ದರು. ಈ ಬೆನ್ನಲ್ಲೆ ಇದನ್ನು ಪ್ರಶ್ನಿಸಿ  ಸಿಎಂ ಸಿದ್ದರಾಮಯ್ಯ  ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್‌ ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

Key words: CM Siddaramaiah,  met, Governor, Bangalore