ನವದೆಹಲಿ,ಡಿಸೆಂಬರ್,20,2023(www.justkannada.in): ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯಕ್ಕೆ ಬರಬೇಕಿರುವ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ನವದೆಹಲಿಯಲ್ಲಿ ಅಮಿತ್ ಶಾ ಅವರನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ, ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆಯನ್ನು ಕೂಡಲೇ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಕ್ರಮ ವಹಿಸುವಂತೆ ಮನವಿ ಮಾಡಿದರು.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೂರಿದ್ದು, ಸುಮಾರು 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಹೀಗಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೋರಿದರು.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಬರಪರಿಹಾರ ಬಿಡುಗಡೆಗೆ ಮನವಿ ಸಲ್ಲಿಸಿದ್ದರು.
Key words: CM Siddaramaiah -met -Union Home Minister- Amit Shah