ರಸ್ತೆಗೆ ಹೆಸರಿಡುವ ವಿಚಾರ: ಸಿಎಂ ಸಿದ್ಧರಾಮಯ್ಯ ಪರ ಬ್ಯಾಟ್ ಬೀಸಿದ  ಶಾಸಕ ಜಿ.ಟಿ ದೇವೇಗೌಡ

ಮೈಸೂರು,ಡಿಸೆಂಬರ್,28,2024 (www.justkannada.in): ಪಿಕೆಟಿಬಿ ರಸ್ತೆಗೆ ಸಿಎಂ ಸಿದ್ದರಾಮಯ್ಯ  ಅವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪರ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡರು ಬ್ಯಾಟ್ ಬೀಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ಪಿಕೆಟಿಬಿ ರಸ್ತೆಗೆ ಪ್ರಿನ್ಸೆಸ್ ರಸ್ತೆ ಅಂತ ನಾಮಕರಣ ಮಾಡಿಲ್ಲ ಅನ್ನುವುದಾದರೆ ಸಿದ್ದರಾಮಯ್ಯ ಅವರ ಹೆಸರನ್ನ ಇಟ್ಟರೇನು ತಪ್ಪಿಲ್ಲ. ಈಗಾಗಲೇ ಸಾಕಷ್ಟು ಚರ್ಚೆಗಳ ನಡೆಯುತ್ತಿವೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಂಸದ ಯದುವೀರ್ ಅವರು ಹೇಳಿವಂತೆ ಆ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂದು ಹೆಸರಿಡಲಾಗಿದೆ ಎನ್ನುತ್ತಾರೆ. ಆದರೆ ಮತ್ತೆ ಕೆಲವರು ಆ ರಸ್ತೆಗೆ ಯಾವ ಹೆಸರನ್ನು ಇಟ್ಟಿಲ್ಲ ಎನ್ನುತ್ತಾರೆ.

ಒಂದು ವೇಳೆ  ಆ ರಸ್ತೆಗೆ ಹೆಸರಿಟ್ಟಲ್ಲದಿದ್ದರೆ ಸಿದ್ದರಾಮಯ್ಯ ಅವರ ಹೆಸರು ಇಟ್ಟರೆ ತಪ್ಪಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಪರ ಶಾಸಕ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದಾರೆ.

Key words: Road naming, CM Siddaramaiah, MLA, G.T. Deve Gowda