ಮುಡಾ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿ: ಸಿಬಿಐ ತನಿಖೆಗೆ ವಹಿಸಿ- ಕೆ.ಎಸ್ ಈಶ್ವರಪ್ಪ ಆಗ್ರಹ

ಶಿವಮೊಗ್ಗ,ಜುಲೈ,8,2024 (www.justkannada.in): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಕ್ಕಿಬಿದ್ದಿದ್ದು ಅವರ ಕುಟುಂಬದವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಮಯ್ಯ ಸಿಕ್ಕಿಹಾಕಿಕೊಂಡಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನ ಬೀದಿಗೆ ತಂದಿದ್ದಾರೆ.  ಈ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದಾರೆ.  ಮುಡಾ ಅಕ್ರಮವನ್ನ ಸಿಬಿಐ ತನಿಖೆಗೆ ವಹಿಸಬೇಕು.  ಸಿಎಂ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ದಿ ನಿಗಮ ಹಗರಣ ದೇಶದ ಗಮನ ಸೆಳೆದಿದೆ. ವಾಲ್ಮೀಕಿ ನಿಗಮದ ಅಧ್ಯಕ್ಷ ರಾಜೀನಾಮೆ ನೀಡಿಲ್ಲ. ಮಾಜಿ ಸಚಿವ ಬಿ. ನಾಗೇಂದ್ರ ಬಸವರಾಜ ದದ್ದಲ್ ರನ್ನ ಬಂಧೀಸಬೇಕು ಎಂದು ಆಗ್ರಹಿಸಿದರು.

ತಾವು ಮತ್ತೆ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆ.ಎಸ್ ಈಶ್ವರಪ್ಪ,  ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪಾ..? ಎಂದು ಪ್ರಶ್ನಿಸಿದರು.  ಹಿಂದೂ ಹೋರಾಟಗಾರರಿಗೆ  ಹಿಂದುತ್ವಕ್ಕೆ ನ್ಯಾಯ ಸಿಗಲಿ  ಎಂಬ ಕಾರಣಕ್ಕೆ ನಾನು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ ಎಂದು ಕೆ. ಎಸ್ ಈಶ್ವರಪ್ಪ ತಿಳಿಸಿದರು.

Key words: CM Siddaramaiah, Muda, scam, KS Eshwarappa